ಪುತ್ತೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಹಲವಾರು ಪರೀಕ್ಷೆಗಳನ್ನು ಬರೆಯುತ್ತಾರೆ. ಅದರಲ್ಲಿ ಒಂದು NET/SLET ಪರೀಕ್ಷೆ ಯೂ ಒಂದು. ವಿದ್ಯಾರ್ಥಿಗಳು ಆದಷ್ಟು ನೈಜ ಪ್ರಶೆಪತ್ರಿಕೆಗಳನ್ನು ನೋಡಿ ಅಭ್ಯಾಸ ಮಾಡುವುದು ಒಳ್ಳೆಯದು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ದೀಕ್ಷಿತ್ ಕುಮಾರ್ ಹೇಳಿದರು.
ಅವರು ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ವಿಭಾಗದ ಆಶ್ರಯದಲ್ಲಿ ಕಾಲೇಜು ವಿಭಾಗದ ಬೋಧಕ ಸಿಬ್ಬಂದಿ ವರ್ಗದ ಆಯ್ಕೆಗೆ ಮಾನದಂಡವಾಗಿರುವ "ರಾಷ್ಟ್ರೀಯ ಬೋಧಕ ಅರ್ಹತಾ ಪರೀಕ್ಷಾ (NET/SLET)" ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸೋಮವಾರ ಮಾತನಾಡಿದರು.
ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೋ.ರಾಘವೇಂದ್ರ, ಪ್ರೊ.ವರ್ಷಿತ್, ಪ್ರೊ.ಶ್ವೇತಾ ರಾವ್ ಹಾಗೂ ಪದವಿ ಉಪನ್ಯಾಸಕರು ಉಪಸ್ಥಿತರಿದ್ದರು.
ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪ್ರೊ.ಲಕ್ಷ್ಮೀ ಭಟ್, ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಡಾ.ವಿಜಯ ಸರಸ್ವತಿ ಬಿ ವಂದಿಸಿದರು.
إرسال تعليق