ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸರಕಾರಿ ನೌಕರರಿಗೆ ಲಸಿಕೆ ಶಿಬಿರ

ಸರಕಾರಿ ನೌಕರರಿಗೆ ಲಸಿಕೆ ಶಿಬಿರ


ಮಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಇದರ ವತಿಯಿಂದ ಸರ್ಕಾರಿ ನೌಕರರಿಗೆ ಮತ್ತು ಕುಟುಂಬ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ನಂದಿನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ ಕಾಮತ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.


ಈ ಸಂದರ್ಭ ಮಾತನಾಡುತ್ತಾ ಸರಕಾರಿ ನೌಕರರ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ಇಲಾಖಾ ನೌಕರರಿಗೆ ಲಸಿಕೆ ನೀಡುವದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ದೇಶದ ಪ್ರಧಾನ ಮಂತ್ರಿಗಳು ಮತ್ತು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಸುತ್ತಿನ ಲಸಿಕಾ ಕಾರ್ಯಕ್ರಮ ನಡೆದಿದ್ದು, ಇನ್ನೆರಡು ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಲಸಿಕಾ ಕಾರ್ಯಕ್ರಮ ಸಂಪೂರ್ಣಗೊಳ್ಳಲಿದೆ ಎಂದರು.


ಇದೇ ಸಂದರ್ಭದಲ್ಲಿ ಶಾಸಕರು ಮುಖ್ಯಮಂತ್ರಿಗಳ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ನೀಡುವ ನಿರ್ಧಾರವನ್ನು ಅಭಿನಂದಿಸಿದರು.


ಜಿಲ್ಲಾಧ್ಯಕ್ಷರಾದ ಪಿ ಕೆ ಕೃಷ್ಣರವರು ಮಾತನಾಡುತ್ತಾ, ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಬಿಡುಗಡೆ ಮಾಡಿರುವುದಕ್ಕಾಗಿ ಸರಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹಾಗೆ ಇಂದು ಶಾಸಕರ ಪ್ರಯತ್ನದಿಂದ ಸರಕಾರಿ ನೌಕರರು, ಮತ್ತು ಕುಟುಂಬಸ್ಥರಿಗೆ ಲಸಿಕೆ ದೊರೆಯುತ್ತಿದೆ ಎಂದರು.


ಇನ್ನಷ್ಟು ಮಂದಿಗೆ ಲಸಿಕೆಯ ಬೇಡಿಕೆ ಇದೆ ಎಂದು ಶಾಸಕರಲ್ಲಿ ತಿಳಿಸಿದಾಗ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆಯನ್ನೂ ಬೇಡಿಕೆಯನ್ನು ಪೂರೈಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಜಿಲ್ಲಾಧ್ಯಕ್ಷರಾದ ಪಿ ಕೆ ಕೃಷ್ಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಎಂ ಎಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಮತ್ತು ಕಾರ್ಯಕಾರಿ ಸಮಿತಿ ನಿರ್ದೇಶಕರುಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಜಯಂತ್, ಮತ್ತಿತರರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم