ಉಜಿರೆ: ಎಸ್‍ಡಿಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಿಬಂದಿಗಳಿಗೆ, ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರ, ಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಎಸ್ಡಿಎಂ ಆಸ್ಪತ್ರೆಯ ಸಹಯೋಗದಲ್ಲಿ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವು ತಾಲೂಕು ಆರೋಗ್ಯಾಧಿಕಾರಿ ಡಾ.ಕಲಾಮಧು ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ಚಂದ್ರ ಎಸ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ ಪಿ, ಎನ್ ಎಸ್ ಎಸ್ ಆಧಿಕಾರಿಗಳಾದ, ಡಾ.ಲಕ್ಮಿನಾರಾಯಣ ಕೆ.ಎಸ್, ದೀಪಾ ಆರ್.ಪಿ, ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ನವೀನ್ ಕುಮಾರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಅಭಿಯಾನದಲ್ಲಿ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬಂದಿ ಹಾಗೂ ಎಸ್ಡಿಎಂ ಆಸ್ಪತ್ರೆಯ ಸಿಬಂದಿಗಳ ಸಹಕಾರದೊಂದಿಗೆ ಒಟ್ಟು 650 ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಯಿತು. ಇದು ಎಸ್‌ಡಿಎಂ ಕಾಲೇಜಿನಲ್ಲಿ ನಡೆದ ಎರಡನೇ ಲಸಿಕಾ ಅಭಿಯಾನ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق