ಕಡಬ: ಬಾಣಂತಿ ಮಹಿಳೆಯೊಬ್ಬರು ವಿಪರೀತ ರಕ್ತಸ್ರಾವದಿಂದಾಗಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆಯೊಂದು ಜು.15ರಂದು ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ವರ್ಷ ಎಂದು ಗುರುತಿಸಲಾಗಿದೆ.
ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ.
ಆ ಬಳಿಕ ಮಹಿಳೆಗೆ ತೀವ್ರ ರಕ್ತಸ್ರಾವ ಉಂಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
Post a Comment