ದಾವಣಗೆರೆ: ಮೂರು ವರ್ಷದ ಮಗುವಿನೊಂದಿಗೆ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.
ಹರ್ಷಿತಾ (3), ಚಂದ್ರಮ್ಮ (25)ವರ್ಷದ ಯುವತಿ ನೇಣು ಬಿಗಿದು ಸಾವನ್ನಪ್ಪಿದ ದುರ್ದೈವಿಗಳು.
ತಾಯಿ ಚಂದ್ರಮ್ಮ ತನ್ನ ಮೂರು ವರ್ಷದ ಹೆಣ್ಣು ಮಗುವಿಗೆ ನೇಣು ಬಿಗಿದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತ ಚಂದ್ರಮ್ಮನ ಗಂಡ ಮಂಜಪ್ಪ ಡಿ ಆರ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯದಲ್ಲಿದ್ದು, ಗಂಡ ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಸ್ಥಳಕ್ಕೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق