ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬ ಸ್ಥಳದಲ್ಲಿ ಆಟೋರಿಕ್ಷಾವೊಂದು ಪಲ್ಟಿಯಾಗಿದ್ದು, ಈ ಅಪಘಾತ ದಲ್ಲಿ ಓರ್ವ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡ ಘಟನೆಯೊಂದು ಇಂದು ಬೆಳಿಗ್ಗೆ ನಡೆದಿದೆ.
ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ವರ್ಷ ಮೃತಪಟ್ಟ ದುರ್ದೈವಿ.
ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದ್ದು , ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಟೋರಿಕ್ಷಾ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹೆಚ್ಚು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಬರುತ್ತಿದ್ದ ವೇಳೆಯಲ್ಲಿ ಪರಿಯಪಾದೆ ಬಳಿ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
إرسال تعليق