ಬೆಳ್ತಂಗಡಿ ರೋಟರಿ ಕ್ಲಬ್ ನ 2021 -22ನೇ ಸಾಲಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.1 ರಂದು ನಡೆಯಿತು.
ರೋಟರಿ ಜಿಲ್ಲಾ 3181 ನಿಯೋಜಿತ ಗವರ್ನರ್ ಪ್ರಕಾಶ್ ಕಾರಂತ್ ರವರು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಕೃಷ್ಣ ಪಡ್ವೆಟ್ನಾಯ , ನೂತನ ಕಾರ್ಯದರ್ಶಿ ಅಬೂಬಕ್ಕರ್ ಹಾಗೂ ನೂತನ ನಿರ್ದೇಶಕ ಮಂಡಳಿಗೆ ಪದಗ್ರಹಣ ಪ್ರಧಾನ ಮಾಡಿದರು.
ಪದಗ್ರಹಣ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಶರತ್ ಕೃಷ್ಣ ಪಡ್ವೆಟ್ನಾಯ, ಮುಂದಿನ ವರ್ಷ ಬೆಳ್ತಂಗಡಿ ರೋಟರಿ ಕ್ಲಬ್ ನ್ನು ಮುನ್ನಡೆಸಲು ಎಲ್ಲರ ಸಹಕಾರವನ್ನು ಕೋರಿದರು. ಮುಖ್ಯ ಅತಿಥಿಗಳು ನಿರ್ಗಮನ ತಂಡಕ್ಕೆ ಹಾಗೂ ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.
ಮುಖ್ಯ ಅತಿಥಿಗಳಾಗಿ ವಲಯ ನಾಲ್ಕರ ಸಹಾಯಕ ಗವರ್ನರ್ ಸುರೇಂದ್ರ ಕಿಣಿ, ನಿಕಟಪೂರ್ವ ಸಹಾಯಕ ಗವರ್ನರ್ ಹಾಗೂ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
ನಿರ್ಗಮನ ಅಧ್ಯಕ್ಷ ಧನಂಜಯ ರಾವ್ ಸ್ವಾಗತಿಸಿ, ಸುವರ್ಣ ಮಹೋತ್ಸವ ವರ್ಷದಲ್ಲಿ ಸಹಕರಿಸಿದ ಎಲ್ಲರಿಗೂ ವಂದಿಸಿದರು. ನಿರ್ಗಮನ ಕಾರ್ಯದರ್ಶಿ ಶ್ರೀಧರ್ ಕೆ.ವಿ ರವರು ಕಳೆದ ಸಾಲಿನ ಕಾರ್ಯಕ್ರಮಗಳ ವರದಿಯನ್ನು ವಾಚಿಸಿದರು. ನೂತನ ಕಾರ್ಯದರ್ಶಿ ಅಬೂಬಕ್ಕರ್ ಧನ್ಯವಾವಿತ್ತರು. ಜಯಕುಮಾರ್ ಶೆಟ್ಟಿ ಹಾಗೂ ಮನೋರಮ ಭಟ್ ಕಾರ್ಯಕ್ರಮ ನಿರೂಪಿಸಿದರು.
إرسال تعليق