ಕಲಬುರ್ಗಿ: ನಗರದ ಹೊರವಲಯದ ಕೋಟನೂರು (ಡಿ) ಗ್ರಾಮದ ಬಳಿ ರಾತ್ರಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ನಗರದ ನಾಲ್ವರು ಮೃತಪಟ್ಟಿದ್ದಾರೆ.
ರಾಹುಲ್ (25)ವರ್ಷ, ಖಾಸಿಂ (26) ಉಲ್ಲಾಸ್ (26) ಮೃತಪಟ್ಟಿದ್ದು, ಇನ್ನೋರ್ವ ಮೃತನ ಗುರುತು ಪತ್ತೆ ಮಾಡಲಾಗುತ್ತಿದ್ದು, ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜೇವರ್ಗಿಯಿಂದ ಕಾರು ನಗರಕ್ಕೆ ಬರುತ್ತಿತ್ತು. ನಗರದಿಂದ ತೆರಳುತ್ತಿದ್ದ ಟ್ಯಾಂಕರ್, ಕಾರಿಗೆ ಡಿಕ್ಕಿ ಹೊಡೆದಿದೆಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.
ಈ ಬಗ್ಗೆ ಕಲಬುರ್ಗಿ ಸಂಚಾರಿ ಠಾಣೆ 2ರಲ್ಲಿ ಪ್ರಕರಣ ದಾಖಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق