ವಿಜಯಪುರ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿದ್ದು, ದುರಂತದಲ್ಲಿ ಬೈಕ್ ನಲ್ಲಿ ಸವಾರರಾದ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆಯೊಂದು ನಡೆದಿದೆ.
ಅಪಘಾತದ ಸ್ಥಳದಲ್ಲೇ ಮೃತಪಟ್ಟವರನ್ನು ವಿಜಯಪುರ ತಾಲೂಕಿನ ಬರಟಗಿ ಎಲ್.ಟಿ. ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೆ.ಎಚ್.ಹುದ್ದಾರ (58 ವರ್ಷ) ಹಾಗೂ ಸಹ ಶಿಕ್ಷಕ ಸಂಗನಗೌಡ ಪಾಟೀಲ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ದುರಂತ ಘಟನೆ ಸಂಭವಿಸಿದ್ದು, ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಈ ಬಗ್ಗೆ ವಿಚಾರ ದಾಖಲಿಸಿಕೊಂಡ ನಗರ ಸಂಚಾರಿ ಪೊಲೀಸ್ ಠಾಣೆಯ ಪಿಎಸೈ ಸಂಜಯ ಕಲ್ಲೂರ ಸಿಬ್ಬಂದಿ ಜೊತೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
إرسال تعليق