ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ತ್ಯಾಗ ಮತ್ತು ಸೇವೆಯ ತಳಹದಿಯಲ್ಲಿ ರಾಷ್ಟ್ರ ವಿಕಾಸ ಸಾಧ್ಯ: ಸ್ವಾಮಿ ಆತ್ಮಶ್ರದ್ಧಾನಂದಜಿ

ತ್ಯಾಗ ಮತ್ತು ಸೇವೆಯ ತಳಹದಿಯಲ್ಲಿ ರಾಷ್ಟ್ರ ವಿಕಾಸ ಸಾಧ್ಯ: ಸ್ವಾಮಿ ಆತ್ಮಶ್ರದ್ಧಾನಂದಜಿ


ಮಂಗಳೂರು: "ಧರ್ಮದ ತಳಹದಿಯಲ್ಲಿ ರಾಷ್ಟ್ರ ನಿರ್ಮಾಣವಾಗಬೇಕು, ತ್ಯಾಗ ಮತ್ತು ಸೇವೆ ನಮ್ಮ ಆದರ್ಶಗಳಾಗಬೇಕು, ಈ ಮೂಲಕ ಆತ್ಮ ವಿಕಾಸ, ರಾಷ್ಟ್ರ ವಿಕಾಸ ಸಾಧ್ಯ" ಎಂದು ಉತ್ತರ ಪ್ರದೇಶದ ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಶ್ರದ್ಧಾನಂದಜಿ ಹೇಳಿದರು.


ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ʼವಿವೇಕ ವಾಣಿʼ ಸರಣಿ ಉಪನ್ಯಾಸ ಕಾರ್ಯಕ್ರಮದ ಆರನೇ ಆನ್‌ಲೈನ್‌ ಉಪನ್ಯಾಸದಲ್ಲಿ "ಆತ್ಮ ವಿಕಾಸ - ರಾಷ್ಟ್ರ ವಿಕಾಸಕ್ಕೆ ಸ್ವಾಮಿ ವಿವೇಕಾನಂದರ ಮಾರ್ಗ" ಎಂಬ ವಿಷಯದ ಬಗ್ಗೆ ಅವರು ಮಾತನಾಡಿದರು.  


ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ಏಕಗಮ್ಯಾನಂದಜಿ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ರಮೇಶ್ ಕೆ., ಬೆಂಗಳೂರಿನ ಮನಸ್ ತರಬೇತಿ ಕೇಂದ್ರದ ನಿರ್ದೇಶಕರಾದ ಪ್ರೊ. ರಘೋತ್ತಮ ರಾವ್, ದೇರಳಕಟ್ಟೆಯ ನಿಟ್ಟೆ ಪಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ಧನೇಶ್ ಕುಮಾರ್, ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ರಾಜಮೋಹನ್ ರಾವ್ ಸೇರಿದಂತೆ ಹಲವಾರು ಗಣ್ಯರು, ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು.  


ವಿವೇಕಾನಂದ ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ.ಶ್ರೀಪತಿ ಕಲ್ಲೂರಾಯ ಪಿ. ಸ್ವಾಗತಿಸಿ, ವಿವೇಕಾನಂದ ಅಧ್ಯಯನ ಕೇಂದ್ರದ ಸದಸ್ಯ ಡಾ. ಚಂದ್ರು ಹೆಗ್ಡೆ ವಂದಿಸಿದರು. ಮಠದ ಸ್ವಯಂಸೇವಕ ರಂಜನ್ ಬೆಳ್ಳರ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.


Key Words: Mangalore University, Viveka vani, Swamy Vivekananda, ಮಂಗಳೂರು ವಿವಿ, ಸ್ವಾಮಿ ವಿವೇಕಾನಂದ, ವಿವೇಕ ವಾಣಿ


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post