ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಾರ್ವಜನಿಕ ವಲಯದ ಅಭಿವೃದ್ಧಿಯೇ ಪತ್ರಿಕೋದ್ಯಮದ ಗುರಿ: ಈಶ್ವರ ದೈತೋಟ

ಸಾರ್ವಜನಿಕ ವಲಯದ ಅಭಿವೃದ್ಧಿಯೇ ಪತ್ರಿಕೋದ್ಯಮದ ಗುರಿ: ಈಶ್ವರ ದೈತೋಟ


ಉಜಿರೆ: ಪತ್ರಿಕೋದ್ಯಮದ ಮೂಲಕ ಸಾಮಾಜದಲ್ಲಿರುವ ತಳ ಮಟ್ಟದ ಸಮಸ್ಯೆಗಳನ್ನು ಪತ್ತೆಹಚ್ಚಬೇಕು. ನಂತರ ಸಮಸ್ಯೆಯ ಹಿನ್ನಲೆಯನ್ನು ತಿಳಿದುಕೊಂಡು ಸಮಗ್ರವಾಗಿ ವರದಿಯ ಮೂಲಕ ಮುನ್ನಲೆಗೆ ತರಬೇಕು. ಇದರಿಂದ ಸಮಾಜದ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಹೇಳಿದರು.


ಅವರು ಎಸ್‍ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಪತ್ರಿಕಾ ದಿನಾಚರಣೆಯ ಪ್ರಯುಕ್ತ ವೆಬಿನಾರ್ ಮೂಲಕ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಪತ್ರಿಕೋದ್ಯಮ ವಿಷಯದಲ್ಲಿ ಉಪನ್ಯಾಸ ನೀಡಿದರು.


ಪತ್ರಕರ್ತನಾದವನು ಅಭಿವೃದ್ಧಿ ಹೊಂದಬೇಕಾದ ಪ್ರದೇಶಗಳಿಗೆ ತೆರಳಿ ವಾಸ್ತವ್ಯ ಹೂಡಬೇಕು. ಅಲ್ಲಿನ ಸ್ಥಳೀಯರೊಂದಿಗೆ ಮುಕ್ತವಾಗಿ ವ್ಯವಹರಿಸಿದಾಗ ಮಾತ್ರ ವಾಸ್ತವ ಸಮಸ್ಯೆಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಅಧ್ಯಯನ ದೃಷ್ಟಿಕೋನದಿಂದ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ ವರದಿ ಮಾಡಬೇಕು.


ಸಾರ್ವಜನಿಕ ವಲಯದಲ್ಲಿ ಹಲವರಿಗೆ ಸೇವೆ ಮಾಡುವ ಅಭಿಲಾಷೆ ಇರುತ್ತದೆ. ಈ ಸಂದರ್ಭದಲ್ಲಿ ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪತ್ರಿಕೆಗಳಿಂದ ಆಗಬೇಕು. ಅಭ್ಯುದಯ ಪತ್ರಿಕೋದ್ಯಮ ಕೆಲಸ ನಡೆಸುವಾಗ ಯಾವುದೇ ನಿರೀಕ್ಷೆ ಬೇಡ. ನೆರವನ್ನು ನಿರೀಕ್ಷಿಸದೆ ಪತ್ರಿಕೋದ್ಯಮದ ದೃಷ್ಟಿಕೋನದಲ್ಲಿ ಸದುದ್ಧೇಶದಿಂದ ಕೆಲಸ ಮಾಡಬೇಕು ಎಂದರು.


ಅಭ್ಯುದಯ ಪತ್ರಿಕೋದ್ಯಮ ಕೇವಲ ಹಳ್ಳಿಗಳಿಗೆ ಸೀಮಿತವಾಗಿಲ್ಲ. ಗ್ರಾಮಾಂತರ ಪ್ರದೇಶ, ನಗರ ಪ್ರದೇಶಗಳಲ್ಲಿರುವ ಸಮಸ್ಯೆಯ ಬಗ್ಗೆಯೂ ಬೆಳಕು ಚೆಲ್ಲಬಹುದು. ಪ್ರಸ್ತುತ ಸಮಾಜದಲ್ಲಿ ಸತ್ಯಾಂಶವಿಲ್ಲದ ಸುದ್ದಿಗಳು ಹರಿದಾಡುತ್ತಿದ್ದು, ಗೊಂದಲ ಸೃಷ್ಟಿಯಾಗುತ್ತಿದೆ. ಈ ಗೊಂದಲಗಳಿಗೆ ಪರಿಹಾರ ಕಂಡುಕೊಂಡಾಗ ಸಫಲತೆ ಸಾಧ್ಯ.

ಈಶ್ವರ್ ದೈತೋಟ


ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ಚಂದ್ರ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪತ್ರಿಕಾರಂಗ ಮಹತ್ವವಾದ ಕೆಲಸಗಳನ್ನು ಮಾಡುತ್ತಿದೆ. ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿ ಧನಾತ್ಮಕತೆ ಹೆಚ್ಚಿಸಲು ಪತ್ರಿಕೋದ್ಯಮದಿಂದ ಸಾಧ್ಯವಾಗುತ್ತಿದೆ ಎಂದರು.

ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ತೇಜಸ್ವಿನಿ ವಂದಿಸಿದರು. ವಿದ್ಯಾರ್ಥಿನಿ ಪಲ್ಲವಿ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم