ಪುತ್ತೂರು: ಭಾಷಾ ಶುದ್ಧತೆ ಸಾಹಿತ್ಯದ ಅವಿಭಾಜ್ಯ ಅಂಗ. ಶ್ರದ್ದೆ ಮತ್ತು ಶಿಸ್ತು ನಮ್ಮಲ್ಲಿದ್ದರೆ ಸಾಹಿತ್ಯದ ಸಾರವನ್ನು ಅರ್ಥ ಮಾಡಿಕೊಳ್ಳುವುದು ಬಹಳ ಸುಲಭ.ಇದರಿಂದ ಸಾಹಿತ್ಯದ ಕುರಿತಾದ ಪ್ರಶ್ನೆಗಳನ್ನು ಉತ್ತರಿಸುವಲ್ಲಿ ನಾವು ಸಫಲರಾಗುತ್ತೇವೆ ಎಂದು ಕೇರಳದ ಸಾಫಿ ಇನ್ಸ್ಟಿಟ್ಯೂಟ್ ಆಫ್ ಆಡ್ವಾನ್ಸ್ಡ್ ಸ್ಟಡಿ ಇಲ್ಲಿನ ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಣವ್ ಕೆ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ಆಂಗ್ಲ ವಿಭಾಗದ ಆಶ್ರಯದಲ್ಲಿ ನಡೆದ ವರ್ಚುವಲ್ ಕಾರ್ಯಾಗಾರದಲ್ಲಿ, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ 'ಸಾಹಿತ್ಯದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದು ಹೇಗೆ' ಎಂಬ ವಿಷಯದ ಕುರಿತು ಮಾತನಾಡಿದರು.
ಸಾಹಿತ್ಯದ ಪರೀಕ್ಷೆಗಳು ಉಳಿದ ಪರೀಕ್ಷೆಗಳಿಗಿಂತ ಭಿನ್ನವಾಗಿರುತ್ತದೆ. ಆದ್ದರಿಂದ ನಮ್ಮಲ್ಲಿರುವ ಏಕಾಗ್ರತೆಯನ್ನು ಸರಿಯಾಗಿ ಉಪಯೋಗಿಸಿಕೊಂಡು ಪ್ರಶ್ನೆಪತ್ರಿಕೆಗಳಲ್ಲಿ ಕೊಟ್ಟ ಸೂಚನೆಗಳನ್ನು ಸರಿಯಾಗಿ ಓದಿಕೊಂಡು ಪ್ರಶ್ನೆಗಳನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳಬೇಕು.ಸಾಹಿತ್ಯವನ್ನು ಓದುವಾಗ ನಾವು ಹೇಗೆ ಅದರೊಳಗೆ ಇಳಿಯುತ್ತೇವೆಯೋ ಅದೇ ರೀತಿ ಆ ವಿಷಯದ ಕುರಿತು ಪರೀಕ್ಷೆಗಳನ್ನು ಎದುರಿಸುವ ಸಮಯದಲ್ಲೂ ಕೂಡ ಗೊಂದಲಕ್ಕೊಳಗಾಗದೆ ಆ ಪ್ರಶ್ನೆಯೊಳಗಿನ ತಿರುಳನ್ನು ಅರಿತು ಉತ್ತರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಎಚ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ IQAC ಘಟಕದ ಸಂಯೋಜಕ ಶಿವಪ್ರಸಾದ್, ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಪ್ರಣವ್ ಕೆ ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಂಗ್ಲ ವಿಭಾಗದ ಉಪನ್ಯಾಸಕಿಯರಾದ ರೇಖಾ ನಾಯರ್, ಅಂಬಿಕಾ ಎನ್ ಆರ್, ಸರಸ್ವತಿ ಸಿ ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿ ಗಳಾದ ಸ್ಫೂರ್ತಿ ಗೌಡ ಸ್ವಾಗತಿಸಿ, ಅಕ್ಷತಾ ವಂದಿಸಿದರು. ದಿವ್ಯ ಶ್ರೀ ಕಾರ್ಯಕ್ರಮ ನಿರೂಪಿಸಿದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق