ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ವರ್ಚುವಲ್ ವಿಚಾರ ಸಂಕಿರಣ

ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ವರ್ಚುವಲ್ ವಿಚಾರ ಸಂಕಿರಣ



ಪುತ್ತೂರು:  ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ  "Basics of GST and Path to Success in GST"   ಎಂಬ ವಿಷಯದ ಬಗ್ಗೆ ಝೂಮ್ ವೇದಿಕೆಯಲ್ಲಿ  ರಾಜ್ಯಮಟ್ಟದ ವಿಚಾರ ಸಂಕೀರ್ಣ ಭಾನುವಾರ ನಡೆಯಿತು.


ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ   Fellow Chartered Accountant ಆಗಿ ಕಾರ್ಯ ನಿರ್ವಹಿಸುತ್ತಿರುವ  CA ಮೈಲಾರ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇವರು ಜಿಎಸ್ ಟಿಯ ಮೂಲ ಮಾಹಿತಿ, ಲೆಕ್ಕಾಚಾರಗಳು, ಪ್ರಯೋಜನಗಳು ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ಜಿಎಸ್ ಟಿಗೆ ಸಂಬಂಧಪಡುವ  ಕೋರ್ಸುಗಳು ಹಾಗೂ ಉದ್ಯೋಗವಕಾಶಗಳು ಇವುಗಳ ಬಗ್ಗೆ ಮಾಹಿತಿ ನೀಡಿದರು.


ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಪುತ್ತೂರಿನ ಸರಕಾರಿ ಮಹಿಳಾ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ  ಡಾ.ಸುಕೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಜಿಎಸ್ ಟಿ ವಿದೇಶಗಳಲ್ಲಿ ಹಾಗೂ ಭಾರತಕ್ಕೆ ಬಂದ ಹಾದಿಯನ್ನು ವಿವರಿಸಿದರು.


ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ ಎನ್ ಇವರು ಅಧ್ಯಕ್ಷತೆಯನ್ನು ವಹಿಸಿ ಭಾರತದಲ್ಲಿ ಜಿಎಸ್  ಟಿಯ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಜಿ ಭಟ್ ಹಾಗೂ ಕಾಲೇಜಿನ ಐಕ್ಯೂಎ ಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ ಎಸ್  ವಿಚಾರಸಂಕಿರಣಕ್ಕೆ ಶುಭವನ್ನು ಕೋರಿದರು.


ವಾಣಿಜ್ಯ ವಿಭಾಗದ ಮುಖ್ಯಸ್ಥೆ ರವಿಕಲ  ಸ್ವಾಗತಿಸಿದರು. ವಿಭಾಗದ ಉಪನ್ಯಾಸಕ ಮುಕುಂದ ಕೃಷ್ಣ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು. ಸುಮಾರು 25 ಕಾಲೇಜುಗಳಿಂದ 430 ಕ್ಕೂ ಅಧಿಕ ಉಪನ್ಯಾಸಕರು  ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post