ಬೆಂಗಳೂರು : ಯುವಕನನ್ನು ಪ್ರೀತಿಸಿ ಆತನೊಂದಿಗೆ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮಹಿಳಾ ಕಾನ್ಸ್ ಟೇಬಲ್ ಮದುವೆಯಾಗಿದ್ದಾರೆ.
ಹೀಗೆ ಮದುವೆಯಾದ ಒಂದೇ ತಿಂಗಳಿನಲ್ಲಿ, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು, ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡುತ್ತಿದ್ದಂತಹ ನೇತ್ರಾ ಎಂಬುವರು, ಪ್ರೀತಿಸಿ ಒಂದು ತಿಂಗಳ ಹಿಂದೆ ಮದುವೆಯಾಗಿದ್ದರು.
ಹೀಗೆ ಮದುವೆಯಾದ ನೇತ್ರಾ ಅವರು, ಚಿಕ್ಕಗೊಲ್ಲರಹಟ್ಟಿಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق