ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ



ಕುಂಬಳೆ: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೆಲವು ಮಕ್ಕಳು ಹಾಗೂ ಅಧ್ಯಾಪಕ ವೃಂದದವರ ಕೂಡುವಿಕೆಯಲ್ಲಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಎನ್ ರಾವ್, ಮುನ್ನಿಪ್ಪಾಡಿಯವರು ರಾಷ್ಟ್ರ ಧ್ವಜಾರೋಹಣ ಮಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿದರು.


ಕೊರೋನಾ ಮಹಾಮಾರಿ ದೇಶದಿಂದ ತೊಲಗಿ ಆದಷ್ಟು ಶೀಘ್ರದಲ್ಲಿ ನಮ್ಮ ದೇಶದಲ್ಲಿ ಶಿಕ್ಷಣ ಸಂಸ್ಥೆಗಳು ಮೊದಲಿನಂತೆ ತೆರೆಯಲಿ, ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುವಂತಾಗಲಿ ಎಂದು ಪ್ರಾರ್ಥಿಸಿದರು.


ಶಾಲಾ ಕೋಶಾಧಿಕಾರಿ ಚಂದ್ರಶೇಖರ ಭಟ್ ಎಯ್ಯೂರು, ಶ್ಯಾಂಭಟ್ ದರ್ಭೆಮಾರ್ಗ, ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ಸಹಿತ ಅಧ್ಯಾಪಕ ವೃಂದ ಕೆಲವರು ಉಪಸ್ಥಿತರಿದ್ದರು. ಮುಂದೆ ಅಲ್ಲಿ ಸೇರಿದ ಮಕ್ಕಳಿಗೆ ಸಿಹಿ ಹಂಚಲಾಯಿತು.


ವರದಿ: ವಿಜಯಾಸುಬ್ರಹ್ಮಣ್ಯ ಕುಂಬಳೆ

ಶಾಲಾ ಗ್ರಂಥಪಾಲಿಕೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم