ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾವರ್ಧಕ ಸಂಘದಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

ವಿದ್ಯಾವರ್ಧಕ ಸಂಘದಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ


ಪುತ್ತೂರು: ದೇಶಕ್ಕಾಗಿ ಅನೇಕ ಜನ ಹೋರಾಡಿದ್ದಾರೆ. ಜೀವವನ್ನು ಪಣಕ್ಕಿಟ್ಟಿದ್ದಾರೆ.  ನಮ್ಮ ದೇಶವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಅವರನ್ನು ಸ್ಮರಿಸುವುದು ಅಗತ್ಯವಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ನಿರ್ದೇಶಕಿ ಡಾ. ಸುಧಾ ಎಸ್. ರಾವ್ ಹೇಳಿದರು


ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಪದವಿಪೂರ್ವ ಕಾಲೇಜು, ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಸಿ)ಗಳ ಸಂಯುಕ್ತ ಆಶ್ರಯದಲ್ಲಿ ನಗರದ ವಿವೇಕಾನಂದ ಕ್ಯಾಂಪಸ್ ನಲ್ಲಿ ನಡೆದ '75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ' ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಭಾನುವಾರ ಮಾತನಾಡಿದರು.


ಸ್ವಾತಂತ್ರ್ಯನಂತರದಲ್ಲಿ ನಮ್ಮ ದೇಶವು ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆಯನ್ನು ಕಂಡಿದೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಭಾರತೀಯರ ತೊಡಗಿಸಿಕೊಳ್ಳುವಿಕೆ ಎಲ್ಲ ಕ್ಷೇತ್ರದಲ್ಲಿಯೂ ಕಂಡುಬರುತ್ತಿದೆ. ಆದರೆ ಪ್ರತಿಭಾ ಪಲಾಯನ ತಪ್ಪಬೇಕು. ಭಾರತೀಯ ಪ್ರತಿಭೆಗಳ ಸೇವೆ ಭಾರತಕ್ಕೆ ಸಿಕ್ಕಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದುವುದರಲ್ಲಿ ಸಂಶಯವಿಲ್ಲ ಎಂದು ಅಭಿಪ್ರಾಯಪಟ್ಟರು.


ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಅವರು ವಿವೇಕಾನಂದ ಪದವಿ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ತಯಾರಿಸಿದ ಪ್ರಾಯೋಗಿಕ ಪತ್ರಿಕೆ ವಿಕಸನದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.

  Upayuktha


ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ವಿಭಾಗದ ವಿದ್ಯಾರ್ಥಿಗಳು ತಯಾರಿಸುತ್ತಿರುವ ವಿಕಸನಕ್ಕೆ ಕೋವಿಡ್-19 ಕಾರಣದಿಂದಾಗಿ ಹಿನ್ನಡೆ ಉಂಟಾದರೂ ಸಂಚಿಕೆಗಳನ್ನು ತರುವಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರು ಶ್ರಮಿಸುತ್ತಿದ್ದಾರೆ ಎನ್ನುವುದು ಶ್ಲಾಘನೀಯ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ತಯಾರಿಸಲಾದ ವಿಕಸನ ವಿಶೇಷ ಸಂಚಿಕೆಯು ಉತ್ತಮವಾಗಿ ಮೂಡಿಬಂದಿದೆ ವಿಭಾಗವು ಇದೇ ರೀತಿಯಾಗಿ ವಿಭಿನ್ನ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಬೆಳೆಯಲಿ ಎಂದು ಶುಭಹಾರೈಸಿದರು.


ಈ ಸಂದರ್ಭ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರು, ವಿವೇಕಾನಂದ ಪದವಿ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಪದವಿಪೂರ್ವ ಕಾಲೇಜು, ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಸಿ) ಗಳ ಆಡಳಿತ ಮಂಡಳಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಭೋದಕ ಮತ್ತು ಭೋದಕೇತರ ಸಿಬ್ಬಂದಿ ವಿವೇಕಾನಂದ ಮಹಾವಿದ್ಯಾಲಯದ ಎನ್ ಸಿಸಿ ಘಟಕ, ರೋವರ್ಸ್ ರೇಂಜರ್ಸ್, ಎನ್ಎಸ್ಎಸ್ ಘಟಕ ಹಾಗೂ ರೆಡ್ ಕ್ರಾಸ್ ಘಟಕದ ಆಯ್ದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವಿವೇಕಾನಂದ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಗಳಾದ ಸಾಯಿರೂಪ ಮತ್ತು ಬಳಗದವರು ರಾಷ್ಟ್ರ ಗೀತೆಯನ್ನು ಹಾಡಿದರು. ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಚಂದ್ರಕುಮಾರ್ ಸ್ವಾಗತಿಸಿ, ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕಿ ಡಾ. ಸೌಮ್ಯ ವಂದಿಸಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಶಾಂಕ್ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ






0 Comments

Post a Comment

Post a Comment (0)

Previous Post Next Post