ರಾಮನಗರ; ವೃಷಭಾವತಿ ನದಿಗೆ ಆಯ ತಪ್ಪಿ ಬಿದ್ದು ಯುವಕ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆಯೊಂದು ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಚೌಕಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಕೌಶಿಕ್ ರೆಡ್ಡಿ (26) ವರ್ಷ ನೀರಿನಲ್ಲಿ ಕೊಚ್ಚಿ ಹೋದ ಯುವಕ.
ಶನಿವಾರ ಸಂಜೆ ಈ ಘಟನೆ ನಡೆದಿದ್ದು, ವಾಕಿಂಗ್ ಮುಗಿಸಿಕೊಂಡು ಬಂದು ಸೇತುವೆ ಮೇಲೆ ಕುಳಿತುಕೊಳ್ಳುವಾಗ ಕೌಶಿಕ್ ಆಯತಪ್ಪಿ ನದಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಕೆಲವೆಡೆ ಶನಿವಾರ ರಾತ್ರಿ ಭಾರಿ ಮಳೆ ಸುರಿದ ಪರಿಣಾಮ ವೃಷಭಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಯುವಕ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ.
إرسال تعليق