ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೂಡುಬಿದಿರೆ: ಆಳ್ವಾಸ್‌ ಆಯುರ್ವೇದ ಕಾಲೇಜಿನಲ್ಲಿ ಆಟಿ ಅಮಾವಾಸ್ಯೆ ಆಚರಣೆ, ಕಷಾಯ ವಿತರಣೆ

ಮೂಡುಬಿದಿರೆ: ಆಳ್ವಾಸ್‌ ಆಯುರ್ವೇದ ಕಾಲೇಜಿನಲ್ಲಿ ಆಟಿ ಅಮಾವಾಸ್ಯೆ ಆಚರಣೆ, ಕಷಾಯ ವಿತರಣೆ


ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ದ್ರವ್ಯಗುಣ ವಿಜ್ಞಾನ ಸ್ನಾತಕೋತ್ತರ ವಿಭಾಗದ ವತಿಯಿಂದ ಆಟಿ ಅಮವಾಸ್ಯೆಯ ಪಾರಂಪರಿಕ ರೋಗ ನಿರೋಧಕ ಔಷಧ ಆಟಿ ಕಷಾಯ ವಿತರಣಾ ಕಾರ್ಯಕ್ರಮವು ನಡೆಯಿತು. 


ಮೂಡುಬಿದಿರೆಯ ಶ್ರೀರಾಮ್ ಮೆಡಿಕಲ್ಸ್ ನ ಮಾಲಕ ನವೀನ್ ಟಿ. ಎಸ್ ದೀಪ ಬೆಳಗಿಸಿ ಕಷಾಯ ಕುಡಿಯುವುದರ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಸ್ಪತ್ರೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 3,000 ಜನರಿಗೆ ಕಷಾಯ ತಯಾರಿಸಿ ವಿತರಿಸಲಾಯಿತು.


ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಸಜಿತ್ ಎಂ., ದ್ರವ್ಯಗುಣ ವಿಜ್ಞಾನ ಮುಖ್ಯಸ್ಥ ಡಾ. ಸುಬ್ರಹ್ಮಣ್ಯ ಪದ್ಯಾಣ, ದ್ರವ್ಯಗುಣ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, ವೈದ್ಯರು, ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم