ಕಾರ್ಕಳ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕವು ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಹೊರಾಂಗಣ ಕ್ರೀಡಾಂಗಣದ ಪರಿಸರದಲ್ಲಿ ಹೊನ್ನೆ, ಸೀಮರುಬ, ಹಿಪ್ಪೆ ಮುಂತಾದ ಜೈವಿಕ ಇಂಧನ ಉತ್ಪಾದನೆಗೆ ಸಹಕಾರಿಯಾಗುವ ತಳಿಯ ಗಿಡಗಳನ್ನು ನೆಡುವ ಮೂಲಕ ಆ.10 ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಿತು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಬಯೋಟೆಕ್ನಾಲಜಿ ವಿಭಾಗವು ಪರಿಸರದ ತ್ಯಾಜ್ಯ ಹಾಗೂ ಮರಗಳಿಂದ ಸಿಗುವ ಕಾಯಿಗಳ ಮೂಲಕ ಇಂಧನ ತಯಾರಿಸುತ್ತಿರುವುದನ್ನು ಹಾಗೂ ವಿಭಾಗದ ಪರಿಸರ ಸಂರಕ್ಷಣಾ ಯೋಜನೆಯನ್ನು ಶ್ಲಾಘಿಸಿದರು.
ಉಪಪ್ರಾಂಶುಪಾಲ ಡಾ.ರಮೇಶ್ ಮಿತ್ತಂತಾಯ, ಡಾ.ಶ್ರೀನಿವಾಸ ರಾವ್ ಬಿ.ಆರ್, ರೆಜಿಸ್ಟ್ರಾರ್ ಪ್ರೊ.ಯೋಗೀಶ್ ಹೆಗ್ಡೆ, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಡಾ.ಸಿ.ವಾಮನ್ ರಾವ್, ಎನ್.ಎಸ್.ಎಸ್ ಆಫೀಸರ್ ಡಾ. ಜನಾರ್ದನ ನಾಯಕ್, ಬಯೋಟೆಕ್ನಾಲಜಿ ವಿಭಾಗದ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕೇತರ ವರ್ಗದವರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment