ಮಡಿಕೇರಿ : ಕಾರು ಅಪಘಾತದಲ್ಲಿ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರವೀಂದ್ರನ್ ಮೃತಪಟ್ಟಿರುವ ಘಟನೆ ಹುಣಸೂರು ಸಮೀಪದ ಚಿಲ್ಕುಂದ ಗ್ರಾಮದ ಸಮೀಪ ನಡೆದಿದೆ.
ಕರ್ತವ್ಯಕ್ಕಾಗಿ ತಮ್ಮ ಕಾರಿನಲ್ಲಿ ಮೈಸೂರಿನಿಂದ ಸೋಮವಾರಪೇಟೆಗೆ ತೆರಳುತ್ತಿದ್ದ ವೇಳೆಯಲ್ಲಿ ಚಿಲ್ಕುಂದ ಗ್ರಾಮದ ಸಮೀಪ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದರು.
ತಕ್ಷಣವೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ದಾರಿ ಮಧ್ಯೆ ಮೃತಪಟ್ಟಿದ್ದರು.
ಜೊತೆಗೆ ಇದ್ದ ತಂಗಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಹಾಗೂ ಮಗ ಅಪಾಯದಿಂದ ಪಾರಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೋವಿಡ್ ನಿಂದ ತಮ್ಮ ತಾಯಿಯನ್ನು ಕಳೆದುಕೊಂಡಿದ್ದ ಇವರು ಕರ್ತವ್ಯಕ್ಕೆ ಮರಳುತ್ತಿರುವಾಗ ಈ ದುರಂತ ನಡೆದಿದೆ. ಈ ಬಗ್ಗೆ ಇಲವಾಲ ಪೊಲೀಸರು ಮೊಕದ್ದಮೆ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Post a Comment