ಬೆಂಗಳೂರು : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತಗಳು ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ನಗರದ ಬನಶಂಕರಿಯ ಸುಚಿತ್ರ ಥಿಯೇಟರ್ ಬಳಿ ಘಟನೆ ನಡೆದಿದ್ದು, ಅಮಲಿನಲ್ಲಿ ಅತೀ ವೇಗವಾಗಿ ಬಂದ ಕಾರು ಚಾಲಕ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.
ಬಳಿಕ ರಸ್ತೆ ಬದಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದು, ನಂತರ ಜೆರಾಕ್ಸ್ ಅಂಗಡಿಯೊಂದರ ಮುಂಭಾಗದ ಶಟರ್ ಗೆ ಡಿಕ್ಕಿ ಹೊಡೆದಿದ್ದಾನೆ.
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಬನಶಂಕರಿ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Post a Comment