ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿಕ್ಕಮಗಳೂರು; ಮದ್ಯ ಮಾರಾಟ, ಸರಬರಾಜು ನಿಷೇಧ

ಚಿಕ್ಕಮಗಳೂರು; ಮದ್ಯ ಮಾರಾಟ, ಸರಬರಾಜು ನಿಷೇಧ

 



ಚಿಕ್ಕಮಗಳೂರು: ತರೀಕೆರೆ ಪುರಸಭೆ ಚುನಾವಣೆ ಸೆ.3ರಂದು ನಡೆಯಲಿದೆ.


ಈ ವೇಳೆಯಲ್ಲಿ ತರೀಕೆರೆ ಪಟ್ಟಣ ಹಾಗು ಪಟ್ಟಣದ ಗಡಿಯಿಂದ 3 ಕಿ ಮೀ ದೂರದ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಮದ್ಯ ಮಾರಾಟ ಸರಬರಾಜು ನಿಷೇಧ ಮಾಡಲಾಗಿದೆ.


ಸೆ.2 ರಂದು ಬೆಳಿಗ್ಗೆ 7 ಗಂಟೆಯಿಂದ ಸೆ.3 ರ ಮಧ್ಯ ರಾತ್ರಿಯವರೆಗೆ ಮದ್ಯದಂಗಡಿ ಮುಚ್ಚುವಂತೆ ಹಾಗು ಮದ್ಯ, ಬಿಯರ್ ಹಾಗೂ ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.

0 Comments

Post a Comment

Post a Comment (0)

Previous Post Next Post