ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ - ರಾಜ್ಯ ಸರ್ಕಾರ ಆದೇಶ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ - ರಾಜ್ಯ ಸರ್ಕಾರ ಆದೇಶ

 


ಬೆಂಗಳೂರು; ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯ ಖರ್ಚುಗೆ ಕಡಿವಾಣ ಹಾಕಿದ್ದಾರೆ. ಹಾರ ತುರಾಯಿ ಹಾಕದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಇನ್ನೂ ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕುವುದು ಬೇಡ. ಅನಗತ್ಯವಾಗಿ ಖರ್ಚು ವೆಚ್ಚ ಮಾಡುವುದು ಬೇಡ ಎಂದು ಸೂಚಿಸಿದ್ದಾರೆ. 


ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. 



ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.


ಅನಗತ್ಯ ಖರ್ಚು ವೆಚ್ಚ ಮಾಡದಂತೆ ಸಿಎಂ ಸೂಚನೆ ಬೆನ್ನಲ್ಲೇ ಮುಖ್ಯಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು, ನೆನಪಿನ ಕಾಣಿಕೆ ನೀಡಬಾರದು.


 ಆದರೆ ಕನ್ನಡ ಪುಸ್ತಕಗಳನ್ನು ನೀಡಿ ಗೌರವಿಸಬಹುದೆಂದು ಆದೇಶದಲ್ಲಿ ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم