ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗೃಹರಕ್ಷಕ ದಳ: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಗೃಹರಕ್ಷಕ ದಳ: ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ


ಮಂಗಳೂರು: ಗೃಹರಕ್ಷಕ ದಳದಲ್ಲಿ ಖಾಲಿಯಿರುವ ಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ ಹೊಂದಿರುವ, ಕಂಪ್ಯೂಟರ್ ಜ್ಞಾನವುಳ್ಳ, ವಾಹನ ಚಾಲನೆ ತಿಳಿದಿರುವ ಹಾಗೂ ಪುರುಷ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.


ಎಸ್.ಎಸ್.ಎಲ್.ಸಿ. ಪಾಸಾಗಿರುವ ಹಾಗೂ 20 ವರ್ಷದಿಂದ 50 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-08-2021. ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇಲ್ಲಿ ಅರ್ಜಿಯನ್ನು ಪಡೆಯಲು ಸೂಚಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0824-2220562 ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم