ಬಂಟ್ವಾಳ: ಮಂಗಳೂರು ಮಂಗಳಾದೇವಿ ನಿವಾಸಿ, ಜಯಂತ ಗಾಣಿಗ ಇವರ ಪತ್ನಿ ಉಷಾ ಜೆ. ಗಾಣಿಗ (52) ಇವರು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ನಿಧನರಾದರು. ಮೃತರಿಗೆ ಪತಿ, ಪುತ್ರ ಮತ್ತು ಪುತ್ರಿ ಇದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ನಂದಿಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಮೃತರು ಬಂಟ್ವಾಳ ತಾಲೂಕಿನ ಕೊಯಿಲ ಗೋವಿಂದಬೆಟ್ಟ ದೇವಸ್ಥಾನ ಸಹಿತ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment