ಸುಳ್ಯ: ಇತ್ತೀಚೆಗೆ ಮುಖ್ಯಮಂತ್ರಿಗಳಿಂದ 2019ನೇ ಸಾಲಿನ ಚಿನ್ನದ ಪದಕ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ್ ಚೂಂತಾರು ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮೀನುಗಾರಿಕಾ ಸಚಿವರಾದ ಎಸ್. ಅಂಗಾರ ಅವರು ಗಣ್ಯರ ಸಮ್ಮುಖದಲ್ಲಿ ಸುಳ್ಯದಲ್ಲಿ ಸಮ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪ್ರಾಮಾಣಿಕ ನಿಷ್ಕಾಮ ಸೇವೆಗೆ ಒಂದಲ್ಲ ಒಂದು ದಿನ ಮನ್ನಣೆ ದೊರೆಯುತ್ತದೆ. ಡಾ|| ಮುರಲೀಮೋಹನ್ ಚೂಂತಾರು ಅವರು ವೈದ್ಯರಾಗಿದ್ದರೂ ಸಮಾಜ ಸೇವೆಯಲ್ಲಿ ತೊಡಗಿ ಗೃಹರಕ್ಷಕ ದಳದಲ್ಲಿ ತೊಡಗಿಸಿ ಕೊಂಡಿರುವುದು ಅತ್ಯಂತ ಸಂತಸದ ವಿಚಾರ. ಅವರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಭಗವಂತ ಕರುಣಿಸಲಿ ಎಂದು ನುಡಿದರು. ಇನ್ನಷ್ಟು ಪ್ರಶಸ್ತಿಗಳು ಅವರಿಗೆ ಬರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಗಿರೀಶ್ ಭಾರಧ್ವಾಜ್, ಉಪಸಮಾದೇಷ್ಟರಾದ ರಮೇಶ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿಶಂಕರ್, ಸುಳ್ಯ ಘಟಕಾಧಿಕಾರಿ ಜಯಂತ್ ಶೆಟ್ಟಿ, ಮಾಜಿ ಘಟಕಾಧಿಕಾರಿಗಳಾದ ಶ್ರೀ ಉಮ್ಮರ್, ಸುಳ್ಯ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ ಹಾಗೂ ರಾಮಕೃಷ್ಣ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment