ಧಾರವಾಡ: ವರದಕ್ಷಿಣೆ ಕಿರುಕುಳ ನೀಡಿ ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆಯೊಂದು ಹುಬ್ಬಳ್ಳಿಯ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.
ಮಂಜುಳಾ ಗಂಜಿಗಟ್ಟಿ (30) ವರ್ಷ ಮೃತ ದುರ್ದೈವಿ. ಮೃತ ಮಂಜುಳಾ ಎರಡು ತಿಂಗಳ ಹಿಂದೆ ಕರಿಬಸಪ್ಪ ಎಂಬಾತ ನನ್ನು ವಿವಾಹವಾಗಿದ್ದರು.
ಗುರುವಾರ ಕೊಲೆಯಾದ ಸ್ಥಿತಿಯಲ್ಲಿ ಮಂಜುಳ ಮೃತದೇಹ ಪತ್ತೆಯಾಗಿದ್ದು, ಪತಿ ಕರಿಬಸಪ್ಪನೇ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಇನ್ನು ಆತನ ಕುಟುಂಬಸ್ಥರು ಕೂಡ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮೃತ ಮಂಜುಳಾ ಪೋಷಕರು ಆರೋಪಿಸಿದ್ದಾರೆ.
ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment