ತುಮಕೂರು: ತಾಲೂಕಿನ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ದಿನದಂದು ಈ ಅವಘಡ ಸಂಭವಿಸಿದೆ.
ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಬಾಲಕ ಮೃತಪಟ್ಟಿದ್ದಾನೆ.
ಶಶಂಕ್ (16)ವರ್ಷ, ಪವನ್ ( 22), ಚಂದನ್ (16) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗಾಯಗೊಂಡಿದ್ದು, ಚಂದನ್ ಮೃತಪಟ್ಟಿದ್ದಾನೆ.
ಇದರಿಂದ ಗಾಯಗೊಂಡವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆಗೆ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ.
ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಗೆ ಡಿಡಿಪಿ ನಂಜಯ್ಯ ಭೇಟಿ ನೀಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ..
إرسال تعليق