ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

 


ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ.


ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವ ಧನಕ್ಕಾಗಿ 25.07 ಕೋಟಿ ರೂ. ಬಿಡುಗಡೆ ಮಾಡಿದೆ.


2,4,6 ಸೆಮಿಸ್ಟರ್ ಬೋಧನೆಗಾಗಿ ನೇಮಕ ಮಾಡಿಕೊಳ್ಳಲಾಗಿದ್ದ ಅತಿಥಿ ಉಪನ್ಯಾಸಕರ ಗೌರವ ಧನಕ್ಕಾಗಿ ಒಟ್ಟು 25.07 ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.


ಮೇ ತಿಂಗಳಲ್ಲಿ ನೇಮಕವಾಗಿರುವ ಉಪನ್ಯಾಸಕರಿಗೆ ಒಟ್ಟು 10.55 ಕೋಟಿ ರೂ. ಜೂನ್ ನಲ್ಲಿ ನೇಮಕಗೊಂಡವರಿಗೆ ಒಟ್ಟು 14.52 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم