ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

 


ಬೆಂಗಳೂರು: ಪ್ರಥಮ ವರ್ಷಕ್ಕೆ ಪ್ರವೇಶ ಪಡೆದವರಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಆಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿ ತರಗತಿಗಳು ಆರಂಭವಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.


2021 -22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗೆ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post