ಮಂಗಳೂರು: ಖ್ಯಾತ ಚುಟುಕು ಕವಿ ಶಿಕ್ಷಕ, ದಕ್ಷಿಣ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಹಾಗೂ ಲೇಖಕ,ಕವಿ,ಸಂಘಟಕ, ಮಂಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಅವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನಿಂದ 'ಸಾಹಿತ್ಯ ರತ್ನ' ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಶನಿವಾರ ಜರಗಿದ ಸಮಾರಂಭದಲ್ಲಿ ಪದ್ಮಶ್ರೀ ಡಾ.ದೊಡ್ಡರಂಗೇ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ವಿ. ತ್ಯಾಗರಾಜ್, ಬೆಂಗಳೂರು ನಗರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಾಯಣ್ಣ, ಕರ್ನಾಟಕ ಕೈಗಾರಿಕೋದ್ಯಮಗಳ ಸಂಘದ ಅಧ್ಯಕ್ಷ ಎಂ.ತಿಮ್ಮಯ್ಯ, ಚಿತ್ರಕಲಾ ಪರಿಷತ್ತಿನ ಉಪಾಧ್ಯಕ್ಷ ಎ. ರಾಮಕೃಷ್ಣಪ್ಪ,ಖ್ಯಾತ ವಿಮರ್ಶಕ ಭೈರಮಂಗಲ ರಾಮೇಗೌಡ, ಕನ್ನಡ ಚಳುವಳಿ ಮುಖಂಡ ಪಾಲನೇತ್ರ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಡಾ.ದೊಡ್ಡರಂಗೇ ಗೌಡ ಅವರ 31ನೇ ಕವನ ಸಂಕಲನ 'ನಲ್ಮೆ ನೇಸರ' ಲೋಕಾರ್ಪಣೆಗೊಂಡಿತು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment