ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸುಳ್ಯ ಘಟಕ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ ಭಾನುವಾರ (ಆ.29) ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯತ್ ಕಟ್ಟಡ, ಸುಳ್ಯ ಇಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಪೌರರಕ್ಷಣಾ ಪಡೆ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕು|ಅನಿತಾಲಕ್ಷ್ಮೀ ಎಸ್., ಕೆ.ಎ.ಎಸ್, ತಹಶೀಲ್ದಾರರು, ಸುಳ್ಯ, ನವೀನ್‍ಚಂದ್ರ ಜೋಗಿ, ವೃತ್ತನಿರೀಕ್ಷಕರು, ಸುಳ್ಯ, ರಮೇಶ್, ಉಪಸಮಾದೇಷ್ಟರು, ಗೃಹರಕ್ಷಕ ದಳ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಹೆಚ್ಚುವರಿ ಉಡುಪಿ ಜಿಲ್ಲೆ, ಶ್ರೀ ಭವಾನಿಶಂಕರ, ಕಾರ್ಯನಿರ್ವಹಣಾಧಿಕಾರಿ, ತಾಲೂಕು ಪಂಚಾಯತ್, ಸುಳ್ಯ, ಇವರು ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪುರಸ್ಕೃತರು ಹಾಗೂ ಗೃಹರಕ್ಷಕ ದಳದ ನಿವೃತ್ತ ಕಂಪೆನಿ ಕಮಾಂಡರ್ ಡಾ|| ಗಿರೀಶ್ ಭಾರದ್ವಾಜ್ ಇವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಘಟಕದ ಘಟಕಾಧಿಕಾರಿಗಳು ಹಾಗೂ ಗೃಹರಕ್ಷಕರುಗಳು ಭಾಗವಹಿಸಲು ಮುಕ್ತ ಆಹ್ವಾನವನ್ನು ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment