ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 6, 2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ 12ನೇ ತರಗತಿ (PUC) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಹಿಂದೂಳಿದ ವರ್ಗದವರಿಗೆ 400 ಮತ್ತು ಎಸ್‌ಸಿ, ಎಸ್ಟಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 19ರಿಂದ 31 ವರ್ಷ, ಇತರೆ SC, ST ಅಭ್ಯರ್ಥಿಗಳಿಗೆ 19ರಿಂದ 33 ವರ್ಷ.
ವೇತನ: ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ksp.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೊಟ್ಟಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Post a Comment