ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ


 

ಮಂಗಳೂರು: ಭಾನುವಾರ ಸ್ವಾತಂತ್ರ್ಯ ದಿನಾಚರಣೆಯಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಇವರ ಜನ್ಮದಿನಾಚರಣೆಯನ್ನು ನಡೆಸಲಾಯಿತು.


ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ ಚೂಂತಾರು ಇವರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಇವರಿಗೆ ಪುಷ್ಪಾಂಜಲಿಯನ್ನು ಅರ್ಪಿಸಿ ಮಾತನಾಡಿದರು. ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುಮುಖ್ಯ ಭೂಮಿಕೆ ವಹಿಸಿದ್ದರು. ಕಿತ್ತೂರು ರಾಣಿ ಚೆನ್ನಮ್ಮ ಅವರ ಬಲಗೈ ಬಂಟನಾಗಿ ಬ್ರಿಟಿಷರ ವಿರುದ್ಧ ಉಗ್ರವಾಗಿ ಕಾದಾಡಿ ದೇಶಕ್ಕಾಗಿ ಬಲಿದಾನಗೈದರು. ಅವರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರನ್ನು ನೆನೆಸಿಕೊಂಡು ನಮ್ಮನ್ನು ದೇಶ ಸೇವೆಗಾಗಿ ಸಮರ್ಪಿಸಿಕೊಳ್ಳಬೇಕಾದ  ಕಾಲಘಟ್ಟದಲ್ಲಿ ನಾವಿಂದು ಇದ್ದೇವೆ. ಅವರ ಬಲಿದಾನ ವ್ಯರ್ಥವಾಗದ ರೀತಿಯಲ್ಲಿ ನಾವು ಇಂದು ಬದುಕಬೇಕಾದ ಅನಿವಾರ್ಯತೆ ಇದೆ ಎಂದು ನುಡಿದರು.  


ಈ ಸಂದರ್ಭದಲ್ಲಿ ಪ್ರೊ|| ಸುರೇಶ್‍ನಾಥ್, ನಿವೃತ್ತ ಪ್ರೊಫೆಸರ್, ಸಂತ ಎಲೋಶಿಯಸ್ ಕಾಲೇಜು, ಶ್ರೀ ಸಂತೋಷ್ ಪೀಟರ್, ನ್ಯಾಯವಾದಿಗಳು ಹಾಗೂ ರೆಡ್‍ಕ್ರಾಸ್ ಸದಸ್ಯರು, ಜಿಲ್ಲಾ ಗೃಹರಕ್ಷಕ ದಳ ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್., ಗೃಹರಕ್ಷಕ ದಳ ಬೆಳ್ಳಾರೆ ಘಟಕದ ಪ್ರಭಾರ ಘಟಕಾಧಿಕಾರಿ ಪಿ. ವಸಂತ್ ಕುಮಾರ್ ಹಾಗೂ ಗೃಹರಕ್ಷಕರಾದ ದುಷ್ಯಂತ್ ರೈ, ದಿವಾಕರ್, ಕನಕಪ್ಪ, ಸುನಿಲ್, ಸಮದ್, ಲೋಕೇಶ್, ಸುಲೋಚನಾ, ಜಯಲಕ್ಷ್ಮಿ, ಆಶಾಲತಾ, ಸಬಿತಾ ಮುಂತಾದವರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post