ಬೇಗೂರು: ಸಮೀಪ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯ ಎದುರು ಲಾರಿ ಮತ್ತು ಸ್ಯಾಂಟ್ರೋ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೈಸೂರಿನ ವಿದ್ಯಾರಣ್ಯಪುರಂನ ನಿವಾಸಿ ಸುಬ್ರಮಣ್ಯ ಎಂಬವರ ಮಗ ಕುಮಾರ್ (57) ವರ್ಷ ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ (766)ಯಲ್ಲಿ ಈ ಘಟನೆ ಸಂಭವಿಸಿದೆ.
ದ್ವಿಚಕ್ರ ವಾಹನ ಹಿಂದಿಕ್ಕುವ ಅವಸರದಲ್ಲಿ ಗುಂಡ್ಲುಪೇಟೆ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬೇಗೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಈಘಟನೆ ಬಗ್ಗೆ ಬೇಗೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ರೇಹನಾ ಬೇಗಂ ಸ್ಥಳಕ್ಕೆ ಧಾವಿಸಿ ತನಿಖೆ ಕೈಗೂಂಡಿದ್ದಾರೆ.
إرسال تعليق