ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಶಾಸಕರಿಂದ ಚಾಲನೆ

ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಶಾಸಕರಿಂದ ಚಾಲನೆ

 



ಅಡ್ಯಾರ್‌ಪದವು: ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ ಅಡ್ಯಾರ್ ಪದವು ಇದರ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿದಿಯಿಂದ 8 ಲಕ್ಷ ಅನುದಾನವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ‌ ಭರತ್ ಶೆಟ್ಟಿಯವರು ಬಿಡುಗಡೆಗೊಳಿಸಿದ್ದು, ಇಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಮುಹೂರ್ತ ಕಾರ್ಯಕ್ರಮ ನೆರವೇರಿಸಿದರು. 

ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಹಾಗೂ ಸಂದೀಪ್ ಪಚ್ಚನಾಡಿ, ಅಡ್ಯಾರ್ ಪದವು ಶಕ್ತಿಕೇಂದ್ರ ಪ್ರಮುಖ್ ಯಾದವ ಸಾಲ್ಯಾನ್, ಬೂತ್ ಅಧ್ಯಕ್ಷ ಕಿಶೋರ್ ಕುಮಾರ್, ಮಾಜಿ ಪಂಚಾಯತ್ ಸದಸ್ಯರಾದ ಸವಿತಾ ಶೆಟ್ಟಿಗಾರ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಕಾಶ್ ಭಟ್, ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್, ಗೌರವ ಸಲಹೆಗಾರ ದಾಮೋದರ್ ಶೆಟ್ಟಿ, ಉಪಾಧ್ಯಕ್ಷ ಕೆ. ಆರ್. ಶೆಟ್ಟಿ ಅಡ್ಯಾರ್ ಪದವು, ಕೋಶಾಧಿಕಾರಿ ಯೋಗಿಶ್ ಆಚಾರ್ಯ, ಉಪ ಕೋಶಾಧಿಕಾರಿ ನಾಗರಾಜ್, ಉಪ ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತು ದೇವಳದ ಭಕ್ತರು ಉಪಸ್ಥಿತಿ ಇದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post