ಬೆಂಗಳೂರು: ನಂಜನಗೂಡು ಶಾಸಕ ಬಿ.ಹರ್ಷವರ್ಧನ್ ಅವರು ತಮ್ಮ ಕ್ಷೇತ್ರದಲ್ಲಿ ಕೈಗೊಂಡಿರುವ ಮಾನವೀಯ ಕಾರ್ಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಹರ್ಷವರ್ಧನ್, ತಮ್ಮ ಕ್ಷೇತ್ರದ ಕೆ ಆರ್ ಪುರದಲ್ಲಿ ಜನರು ಕೈಯಿಂದಲೇ ಚರಂಡಿ ಹೊಲಸನ್ನು ಹೊತ್ತು ಹಾಕುವ ಅಮಾನವೀಯ ಪದ್ಧತಿ ಕೊನೆಗೊಂಡಿರುವ ಕುರಿತು ವಿವರಣೆ ನೀಡಿ, ಈ ಕುರಿತು ಮಾಹಿತಿ ಫಲಕವೊಂದನ್ನು ನೀಡಿದರು.
ತಮ್ಮ ಅಜ್ಜ, ಅಂದಿನ ಸಚಿವರಾಗಿದ್ದ ಬಿ. ಬಸವಲಿಂಗಪ್ಪ ಅವರು 50 ವರ್ಷಗಳ ಹಿಂದೆ ಮಲಹೊರುವ ಅಮಾನವೀಯ ಪದ್ಧತಿ ಅಂತ್ಯಗೊಳಿಸುವ ಕುರಿತು ವಿಧಾನಸೌಧದಲ್ಲಿ ಘೋಷಣೆ ಮಾಡಿದ್ದರು. ಇದೀಗ ತಾವು ಶಾಸಕರಾದ ನಂತರ ಮೊದಲ ಆದ್ಯತೆಯಾಗಿ ಕೆ ಆರ್ ಪುರದಲ್ಲಿ ಇಂದಿಗೂ ನಡೆದುಕೊಂಡು ಬಂದಿದ್ದ ಚರಂಡಿ ಹೊಲಸು ಎತ್ತುವ ಅಮಾನವೀಯ ಪದ್ಧತಿಗೆ ತಿಲಾಂಜಲಿ ನೀಡಿರುವ ಕುರಿತು ಬಸವರಾಜ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದರು.
ಸಮಸ್ಯೆಗಳನ್ನು ನಿವಾರಿಸಿ, ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದಾಗಿ ಗ್ರಾಮದ ಜನರು ಈಗ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಆರೋಗ್ಯ ಮತ್ತು ಸ್ವಚ್ಛತೆಗೆ ಗಮನ ನೀಡಲಾಗುತ್ತಿದೆ. ಇಡೀ ಗ್ರಾಮದ ಜನರಲ್ಲಿ ಸಂತಸ ಮೂಡಿದೆ ಎಂದೂ ಹರ್ಷವರ್ಧನ್ ವಿವರಿಸಿದರು.
ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷವರ್ಧನ್ ಅವರ ಕಾರ್ಯಕ್ಕೆ ತೀವ್ರ ಪ್ರಶಂಸೆ ವ್ಯಕ್ತಪಡಿಸಿದರು. ಜೊತೆಗೆ, ಇಡೀ ಕ್ಷೇತ್ರದಲ್ಲಿ ಇಂತಹ ಮಾದರಿಯಾದ ಕೆಲಸಗಳನ್ನು ಮಾಡುವಂತೆ ಪ್ರೋತ್ಸಾಹಿಸಿದರು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಬಿ ಹರ್ಷವರ್ಧನ್
ಶಾಸಕರು - ನಂಜನಗೂಡು
M: 99010 99955
Email: harshavardhanbjp@gmail.com
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق