ಮಂಗಳೂರು: ಕೋವಿಡ್ ಕಾರಣದಿಂದಾಗಿ ಎಪ್ರಿಲ್‌ನಲ್ಲಿ ಮುಂದೂಡಿಕೆಯಾಗಿರುವ ಮಂಗಳೂರು ವಿಶ್ವವಿದ್ಯಾನಿಲಯದ 1, 3, 5 ಹಾಗೂ 7ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳು ಆ. 2 ರಿಂದ ನಡೆಯುತ್ತಿವೆ.
1 ಹಾಗೂ 3ನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಆ. 5ರಂದು ಆರಂಭವಾಗಲಿವೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದ್ದರೂ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹಾಗೆಯೇ ಬಸ್ ಸಮಸ್ಯೆ ಸೇರಿದಂತೆ ಪರೀಕ್ಷೆಗೆ ಹಾಜರಾಗದವರಿಗೆ ಮುಂದಿನ ದಿನದಲ್ಲಿ ವಿಶೇಷ ಪರೀಕ್ಷೆ ನಡೆಸಲು ವಿ.ವಿ ನಿರ್ಧರಿಸಿದೆ.
إرسال تعليق