ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸೀಮಂತ ಕಾರ್ಯಕ್ರಮದಲ್ಲಿ ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸೀಮಂತ ಕಾರ್ಯಕ್ರಮದಲ್ಲಿ ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

 


ದಾವಣಗೆರೆ: ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ  ಅಸ್ವಸ್ಥಗೊಂಡಿರುವ ಘಟನೆಯೊಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ಜರುಗಿದೆ.


ಯಾವುದೇ ಪ್ರಾಣಹಾನಿಯಾಗಿಲ್ಲ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ ಜರುಗಿದ್ದು, ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಹೋಳಿಗೆ ಸಿಹಿ ಅಡುಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.


ಈ ಸೀಮಂತ ಕಾರ್ಯಕ್ರಮದಲ್ಲಿ ನೂರಾರು ಜನರು ಸಿಹಿಯೂಟ ಸೇವಿಸಿದ್ದರು. ಆಹಾರ ಸೇವಿಸಿದ ತಕ್ಷಣ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.  


ತಕ್ಷಣ ಎಲ್ಲರನ್ನೂ ಹತ್ತಿರದ ಬೆಣ್ಣೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ರವಾನಿಸಿದ್ದು, ಹಲವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆಂದು ಮಾಹಿತಿ ತಿಳಿದುಬಂದಿದೆ.


ಇನ್ನೂ 20ಕ್ಕೂ ಹೆಚ್ಚು ಮಂದಿ ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم