ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ಈಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಹಿಡಿದು ಪೊಲೀಸರ ತಂಡಗಳು ತಮಿಳುನಾಡು ಮತ್ತು ಕೇರಳಕ್ಕೆ ಶುಕ್ರವಾರ ತೆರಳಿದ್ದರು. ಶುಕ್ರವಾರ ತಡರಾತ್ರಿಯ ಹೊತ್ತಿಗೆ ನಾಲ್ವರನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇವರುಗಳು ಈ ಘಟನೆ ನಡೆದ ಸಂದರ್ಭದಲ್ಲಿ ಸ್ಥಳಕ್ಕೆ ಹೋಗಿದ್ದು ಏಕೆ, ನಂತರ ರಾಜ್ಯ ಬಿಟ್ಟು ಹೋಗಿದ್ದು ಏಕೆ ಎಂಬ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Post a Comment