ಮೈಸೂರು: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು, ಸಂತ್ರಸ್ತ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ ಅರ್ಥ ಆಗುತ್ತದೆ. ನಾಗರಿಕ ಸಮಾಜದಲ್ಲಿ ಈ ರೀತಿಯ ದುಷ್ಕೃತ್ಯವನ್ನು ಯಾರೂ ಸಹಿಸುವುದಿಲ್ಲ. ನಾಗರಿಕ ಸಮಾಜ ಇದನ್ನು ಸಾಮೂಹಿಕವಾಗಿ ಖಂಡಿಸಬೇಕು ಎಂದು ಸಚಿವೆ ನುಡಿದರು.
ಮುಖ್ಯಮಂತ್ರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಣಗಣಿಸಿದ್ದಾರೆ. ಈ ಪ್ರಕರಣದ ಆರೋಪಿಗಳ ಪತ್ತೆಗೆ ಈಗಾಗಲೇ ಆದೇಶ ನೀಡಿದ್ದಾರೆ. ಗೃಹ ಸಚಿವರೂ ಆರೋಪಿಗಳ ಪತ್ತೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್. ಟಿ. ಸೋಮಶೇಖರ್ ಅವರೂ ಇಲ್ಲಿಯೇ ಇದ್ದು ಸಂತ್ರಸ್ತ ಯುವತಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಿದ್ದು, ಆರೋಪಿಗಳ ಮತ್ತೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಾನೂ ಕೂಡ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ ಎಂದು ಸಚಿವೆ ತಿಳಿಸಿದರು.
ನಮ್ಮ ಸರ್ಕಾರ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಎಲ್ಲ ರೀತಿಯಲ್ಲಿ ಸಮರ್ಥವಾಗಿದೆ. ಆದಷ್ಟು ಬೇಗ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸುವ ಕೆಲಸ ಆಗುತ್ತದೆ ಎನ್ನುವ ವಿಶ್ವಾಸ ಇದೆ ಎಂದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق