ನಿಟ್ಟೆ: ಪ್ರತಿಷ್ಠಿತ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯಕ್ಕೆ ಕೆ.ಎಸ್.ಸಿ.ಎಸ್.ಟಿ ಐಪಿ ಅವಾರ್ಡ್ & ರಿವಾರ್ಡ್ 2021 ಕಾರ್ಯಕ್ರಮದಡಿಯಲ್ಲಿ ಪ್ರಶಸ್ತಿ ಲಭಿಸಿದೆ. ಆ.24 ರಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ ಆಯೋಜಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಕೆ.ಎಸ್.ಸಿ.ಎಸ್.ಟಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಹೇಮಂತ್ ಕುಮಾರ್ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಘೋಷಿಸಿದರು.
'ಕಳೆದ ಹಲವು ವರ್ಷಗಳಿಂದ ನಿಟ್ಟೆ ತಾಂತ್ರಿಕ ಕಾಲೇಜು ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ರಿಸರ್ಚ್ & ಪೇಟೆಂಟಿಂಗ್ ವಿಷಯದಲ್ಲಿ ನೀಡುತ್ತಿರುವ ಕೊಡುಗೆಯನ್ನು ಮನಗಂಡು ಕೆ.ಎಸ್.ಸಿ.ಎಸ್.ಟಿ ಸಂಸ್ಥೆಯು ಈ ಪ್ರಶಸ್ತಿಯನ್ನು ನಮ್ಮ ಕಾಲೇಜಿಗೆ ಘೋಷಿಸಿರುವುದು ಹರ್ಷ ತಂದಿದೆ' ಎಂದು ಪ್ರಾಂಶುಪಾಲ ಡಾ|ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق