ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೆರ್ಲ ಪಿಎಚ್‌ಸಿ ಎಂಡೋ ಪುನರ್ವಸತಿ ಕೇಂದ್ರದ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರ

ಪೆರ್ಲ ಪಿಎಚ್‌ಸಿ ಎಂಡೋ ಪುನರ್ವಸತಿ ಕೇಂದ್ರದ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರ



ಪೆರ್ಲ: ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಪೆರ್ಲ ಪೇಟೆಯಲ್ಲಿನ ಎಣ್ಮಕಜೆ ಗ್ರಾಮ ಪಂಚಾಯತ್ ನ ಪ್ರಾಥಮಿಕ ಆರೋಗ್ಯ ಕೇಂದ್ರ (PHC) ಕಟ್ಟಡ ಶಿಥಿಲವಾಗುತ್ತಿರುವುದನ್ನು ಗಮನಿಸಿ ಇದನ್ನು ಕಳೆದ ಎಂಡೋಸಲ್ಫಾನ್ ಪ್ಯಾಕೇಜ್‌ನಲ್ಲಿ ನಿರ್ಮಾಣಗೊಂಡ ಪುನರ್ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.


ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ಗುರುವಾರ ನಡೆದ ಸಾಂಕೇತಿಕ ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಸೋಮಶೇಖರ ಜೆಎಸ್ ಉದ್ಘಾಟಿಸಿದರು. ಪಂ.ಉಪಾಧ್ಯಕ್ಷೆ ಡಾ.ಫಾತಿಮತ್ ಝಹನಾಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.


ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್, ಪಂ.ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್. ಗಾಂಭೀರ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್, ಕ್ಷೇಮ ಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸೌದಾಬಿ ಹನೀಫ್, ಗ್ರಾ.ಪಂ. ಸದಸ್ಯರಾದ ರಮ್ಲಾ ಇಬ್ರಾಹಿಂ, ರಾಧಾಕೃಷ್ಣ ನಾಯಕ್ ಶೇಣಿ, ಮಹೇಶ್ ಭಟ್, ಉಷಾ ಗಣೇಶ್, ಇಂದಿರಾ, ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು. ಮೆಡಿಕಲ್ ಆಫೀಸರ್ ಡಾ. ದೀಪ ರಾಜ್ ಸ್ವಾಗತಿಸಿ ಹೆಲ್ತ್ ಇನ್ಸ್ಪೆಕ್ಟರ್ ಸಲ್ಮತ್ತ್ ವಂದಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post