ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಕಾರಣ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ಬೆಂಗಳೂರಿನ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ.
ಆಟೋ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಟೋ ಚಾಲಕ ಕಿರಣ್ (26), ಪ್ರಯಾಣಿಕ ಅನ್ವರ್ ಹುಸೇನ್ (28) ಮತ್ತು ರಾಹುಲ್ (21) ಮೃತಪಟ್ಟಿದ್ದಾರೆ.
ಮತ್ತೊಬ್ಬ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದ್ದು, ಪಲ್ಟಿಯಾದ ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
إرسال تعليق