ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ: ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ

ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ: ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ

 



ಉಜಿರೆ: ಕಳೆದ ಆರ್ಥಿಕ ವರ್ಷದಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಮೂಲಕ 525 ತರಬೇತಿ ಕಾರ್ಯಕ್ರಮಗಳ ಮೂಲಕ 13,061 ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗ ತರಬೇತಿ ನೀಡಲಾಗಿದೆ ಎಂದು ಉಜಿರೆಯಲ್ಲಿರುವ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಕೇಂದ್ರೀಯ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇವರಲ್ಲಿ ಶೇ. 71 ರಷ್ಟು ಮಂದಿ ಅಂದರೆ 9,237 ಮಹಿಳೆಯರು. 1982ರಲ್ಲಿ ತರಬೇತಿ ಸಂಸ್ಥೆ ಆರಂಭವಾದ ಬಳಿಕ ಒಟ್ಟು 16390 ತರಬೇತಿ ಕಾರ್ಯಕ್ರಮಗಳ ಮೂಲಕ 5,02,720 ಮಂದಿಗೆ ಸ್ವ-ಉದ್ಯೋಗ ತರಬೇತಿ ನೀಡಿದ್ದು ಇವರಲ್ಲಿ ಶೇ.45 ರಷ್ಟು ಅಂದರೆ 2,28,514 ಮಂದಿ ಮಹಿಳೆಯರು. Upayuktha


ಕಳೆದ ವರ್ಷದಲ್ಲಿ ತರಬೇತಿ ಪಡೆದ 9568 ಮಂದಿ ನಿರುದ್ಯೋಗಿಗಳು ಸ್ವ-ಉದ್ಯೋಗ ಪ್ರಾರಂಭಿಸಿದ್ದು, ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಇವರಲ್ಲಿ 4,391 ಮಂದಿಗೆ ವಿವಿಧ ಬ್ಯಾಂಕುಗಳು 88.76 ಕೋಟಿ ರೂ. ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿವೆ.


1982ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಉಜಿರೆಯಲ್ಲಿ ಸಿದ್ಧವನ ಗುರುಕುಲದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ತರಬೇತಿ ಸಂಸ್ಥೆಯ ಶಾಖೆಗಳು ಇಂದು ದೇಶದೆಲ್ಲೆಡೆ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡಿ ಸ್ವ-ಉದ್ಯೋಗ ಆರಂಭಿಸಲು ಪ್ರೋತ್ಸಾಹ ಮಾರ್ಗದರ್ಶನ ನೀಡುತ್ತಿವೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದಲೂ ತರಬೇತಿ ಸಂಸ್ಥೆಗಳು ಮಾನ್ಯತೆ ಹೊಂದಿವೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post