ಪಾಣಾಜೆ: ಇಲ್ಲಿನ ಸುಬೋಧ ಪ್ರೌಢಶಾಲೆಗೆ ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶೇ 100 ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ ಎಲ್ಲ 40 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದಾರೆ.
ಚಿತ್ರಾ ರೈ ಬಿ 588 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣಳಾಗಿದ್ದಾಳೆ. 8 ವಿದ್ಯಾರ್ಥಿಗಳು ಹಾಗೂ 10 ವಿದ್ಯಾರ್ಥಿನಿಯರು ಪ್ರಥಮ ಸ್ಥಾನ, 10 ವಿದ್ಯಾರ್ಥಿಗಳು ಹಾಗೂ 4 ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಮತ್ತು 6 ಬಾಲಕರು ಹಾಗೂ ಒಬ್ಬ ಬಾಲಕಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ ತಿಳಿಸಿದ್ದಾರೆ.
Post a Comment