ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುಂಜಾಲಕಟ್ಟೆ: ಸದ್ಭಾವನಾ ದಿನಾಚರಣೆ- ವೆಬಿನಾರ್

ಪುಂಜಾಲಕಟ್ಟೆ: ಸದ್ಭಾವನಾ ದಿನಾಚರಣೆ- ವೆಬಿನಾರ್


ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಭಾರತೀಯ ಯುವ ರೆಡ್ ಕ್ರಾಸ್ ಘಟಕ ಇದರ ಇದರ ಸಹಯೋಗದೊಂದಿಗೆ ಇಂದು (ಆ.20) ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ "ಸದ್ಭಾವನ ದಿನಾಚರಣೆ" ಕುರಿತು ವೆಬಿನಾರ್ ಕಾರ್ಯಕ್ರಮವನ್ನು ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಿ.ಜಿ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಸಹಾಯಕ ಪ್ರಾಧ್ಯಪಕರಾದ ಡಾ. ಉದಯ ಶೆಟ್ಟಿ ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಜೊತೆಗಿದ್ದು ವಿದ್ಯಾರ್ಥಿಗಳಲ್ಲಿ ಸೌಹಾರ್ದತೆ, ಸಹೃದಯತೆ, ಭ್ರಾತೃತ್ವ, ಮುಂತಾದ ವಿಷಯಗಳ ಕುರಿತು ಅರಿವು ಮೂಡಿಸಿದರು.


ಕಾಲೇಜಿನ ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕಿ ಹಾಗೂ ರೇಂಜರ್ಸ್ ವಿಭಾಗದ ಸಂಚಾಲಕರು ಆದ ಪ್ರೊ. ಪ್ರೀತಿ ಕೆ.ರಾವ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.ಸಭಾಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಗಣಪತಿ ಭಟ್ ಕುಳಮರ್ವ ಇವರು ದಿನಾಚರಣೆಯ ಅಗತ್ಯತೆಯ ಕುರಿತು ಮಾತನಾಡಿದರು.


ಕಾರ್ಯಕ್ರಮದಲ್ಲಿ ರೋವರ್ಸ್ ವಿಭಾಗದ ಸಂಚಾಲಕರಾದ ಪ್ರೊ. ಆಂಜನೇಯ MN. ರೆಡ್ ಕ್ರಾಸ್ ವಿಭಾಗದ ಸಂಚಾಲಕರಾದ ಪ್ರೊ. ಗೀತಾ,ಪ್ರೊ. ಶೇಖರ್ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಮೃತ ಸ್ವಾಗತಿಸಿ, ಶಿಲ್ಪಾ ಧನ್ಯವಾದವಿತ್ತರು. ಶಮೀರ್ ನಿರೂಪಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post