ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಸ್ಕೂಟರ್ ಸವಾರ ಸಾವು

ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಸ್ಕೂಟರ್ ಸವಾರ ಸಾವು


 


ಉಡುಪಿ : ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಚ್ಚಿಲ ಸಮೀಪದ ಮುಳೂರಿನಲ್ಲಿ ನಡೆದಿದೆ.


 ಮೃತಪಟ್ಟ ಸ್ಕೂಟರ್ ಸವಾರನನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಎಂದು ಗುರುತಿಸಲಾಗಿದೆ.


ಇವರು ಉಡುಪಿ ಕಡೆಯಿಂದ ಪಡುಬಿದ್ರೆಯ ಕಡೆಗೆ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಯ ಹಿಂಬದಿಗೆ ಢಿಕ್ಕಿಯಾಗಿದೆ.


ಈ ಅಪಘಾತದಿಂದ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದೆ.  


ಘಟನೆಯಿಂದ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಸವಾರ ಅದಾಗಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم