ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ನಟಿ ಲೀಲಾವತಿ ಕಾಲು ಜಾರಿ ಬಿದ್ದು ಗಾಯ

ಹಿರಿಯ ನಟಿ ಲೀಲಾವತಿ ಕಾಲು ಜಾರಿ ಬಿದ್ದು ಗಾಯ

 


ಬೆಂಗಳೂರು ; ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಮತ್ತು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.


 ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ. 


ತಕ್ಷಣ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಪುತ್ರ ವಿನೋದ್ ರಾಜ್ ಜೊತೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ಲೀಲಾವತಿ ಅವರಿಗೆ ವೈದ್ಯರು ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.


ಈ ಬಗ್ಗೆ ಮಾಹಿತಿ ಮಾಹಿತಿ ನೀಡಿದ ಪುತ್ರ ವಿನೋದ್ ರಾಜ್ ಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಅರ್ಧ-ಮುಕ್ಕಾಲು ಗಂಟೆ ಒದ್ದಾಡಿದ್ದಾರೆ. 


ಜೋರಾಗಿ ಕೂಗಿ ಯಾರನ್ನಾದರೂ ಕರೆಯಲೂ ಸಾಧ್ಯವಾಗಿಲ್ಲ. ಬಳಿಕ ನಿಧಾನವಾಗಿ ಬಾಗಿಲು ತೆಗೆದು ಹೊರಬಂದಿದ್ದಾರೆ ಎಂದು ವಿನೋದ್ ರಾಜ್ ಹೇಳಿದ್ದಾರೆ.

0 تعليقات

إرسال تعليق

Post a Comment (0)

أحدث أقدم