ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆಯೊಂದು ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಮಂಗಳಾದೇವಿ- ಸುರತ್ಕಲ್ ನಡುವೆ ಚಲಿಸುವ ಸಿಟಿ ಬಸ್ ಮೇಲೆ ಬೃಹತ್ತಾದ ತೆಂಗಿನ ಮರ ಬಿದ್ದಿದೆ.
ಇದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಸಿಟಿ ಬಸ್ ಮೇಲೆ ಬೀಳುವ ಮುನ್ನ ಮರವು ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ಕೇಬಲ್ ಗಳನ್ನು ತುಂಡರಿಸಿದೆ.
ಘಟನೆ ನಡೆದ ಸ್ಥಳಕ್ಕೆ ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಮತ್ತು ಮಾಜಿ ಮೇಯರ್ ಶಶಿಧರ ಹೆಗ್ಡೆ ಆಗಮಿಸಿ, ಪರಿಶೀಲನೆ ನಡೆಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment